ಅರೆಭಾಷೆ ಸಾಹಿತ್ಯ, ಸಂಸ್ಕೃತಿ ಶಿಬಿರ

Sul_Arebhashe
Published on

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ, ಐಕ್ಯೂಎಸಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾಮಟ್ಟದ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ -2024 ನೆಹರು ಮೆಮೋರಿಯಲ್ ಕಾಲೇಜಿನ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಾರ್ಯದರ್ಶಿ ಕೆ.ವಿ.ಹೇಮನಾಥ್ ಉದ್ಘಾಟಿಸಿದರು. ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು.

ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ.ರುದ್ರಕುಮಾರ್ ಎಂ.ಎಂ., ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ., ಅರೆಭಾಷೆ ಅಕಾಡೆಮಿ ಸದಸ್ಯ ಶ್ರೀ ಚಂದ್ರಶೇಖರ್ ಪೇರಾಲ್, ಲತಾ ಪ್ರಸಾದ್ ಕುದ್ಪಾಜೆ, ಚಂದ್ರಾವತಿ ಬಡ್ಡಡ್ಕ, ವಿನೋದ್ ಮೂಡಗದ್ದೆ, ನೆಹರು ಮೆಮೋರಿಯಲ್ ಕಾಲೇಜಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಂಚಾಲಕ ಶ್ರೀ ಸಂಜೀವ ಕುದ್ಪಾಜೆ, ಕಾಲೇಜಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಅಧ್ಯಕ್ಷೆ ಹವ್ಯಶ್ರೀ ಉಪಸ್ಥಿತರಿದ್ದರು.

ತೃತೀಯ ಬಿಎ ವಿದ್ಯಾರ್ಥಿನಿ ಪ್ರಾಪ್ತಿ ಕೆ.ಸಿ.ಪ್ರಾರ್ಥಿಸಿದರು. ಪ್ರೊ.ಸಂಜೀವ ಕುದ್ಪಾಜೆ ಸ್ವಾಗತಿಸಿದರು. ಕೃಪಾ ವಂದಿಸಿದರು. ಡಾ.ಅನುರಾಧ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸೋಭಾನೆ, ಅಜ್ಜಿಕಥೆ, ಒಗಟು ಬುಡ್ಸುದು, ಆಶುಕವಿತೆ, ಅರೆಭಾಷೆ ಪೊಳ್ಮೆ ನಡೆಯಿತು. ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ವಿದ್ಯಾಸಂಸ್ಥೆಗಳ ಸುಮಾರು 90ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net