

ಮಡಿಕೇರಿ:
ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಠಿಕೊಪ್ಪ ನಗರದಲ್ಲಿನ ಜ್ಯುವೆಲರಿಯಲ್ಲಿ ಒಂದರಲ್ಲಿ ಕಳೆದ ವಾರ ಸಂಭವಿಸಿದ ಕಳುವು ಪ್ರಕರಣಕ್ಕೆ ಸಂಬAಧಿಸಿದAತೆ ಮಹಾರಾಷ್ಟç ಮೂಲದ ಮೂಲವರು ಮಹಿಳೆಯರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ ಆಗಿದ್ದಾರೆ. ಮಹರಾಷ್ಟçದ ಸಾಂಗ್ಲಿ ಜಿಲ್ಲೆ ಅಲ್ಪನಾ (37), ಬಬಿತಾ (47) ಹಾಗೂ ಪೂಜಾ (29) ಬಂಧಿತ ಆರೋಪಿಗಳು.
ಬಂಧಿತರಿAದ 22.180 ಗ್ರಾಂ ತೂಕದ 2 ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಕೆ. ರಾಮರಾಜನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.14ರಂದು ಮೂವರು ಅಪರಿಚಿತ ಮಹಿಳೆಯರು ಚಿನ್ನಾಭರಣ ಖರೀದಿಸುವ ನೆಪದಲ್ಲಿ ಅಂಗಡಿಗೆ ಭೇಟಿ ನೀಡಿ ಅಂಗಡಿಯವರ ಗಮನಕ್ಕೆ ಬಾರದಂತೆ ಅಂದಾಜು 22 ಗ್ರಾಂ ತೂಕದ 2 ಚಿನ್ನದ ಸರವನ್ನು ಕಳವು ಮಾಡಿರುವ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಸೆ.22 ರಂದು ಈ ಮೂವರು ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅನುಮಾನಸ್ಪದ ವ್ಯಕ್ತಿಗಳು ಕಂಡುಬAದಲ್ಲಿ ಹಾಗೂ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬAದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.