ತಿಳಿವಳಿಕೆ ಇದ್ದಾಗ ವಾದ ಮಂಡನೆ ಸುಲಭ

vichara
ಭಾರತೀಯ ನ್ಯಾಯ ಸಂಹಿತೆ 2023 ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ವಿಚಾರ ಸಂಕಿರಣ ನಡೆಯಿತು
Published on

ಕುಂದಾಪುರ: ಹೊಸದಾಗಿ ಜಾರಿಯಾದ ಕಾನೂನಿನಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಐಪಿಸಿ ಹಾಗೂ ಬಿಎನ್‌ಎಸ್‌ನ ಅಂಶಗಳ ಸರಿಯಾದ ತಿಳಿವಳಿಕೆ ಇಟ್ಟುಕೊಂಡಾಗ ಸುಲಭದಲ್ಲಿ ವಾದ ಮಂಡನೆ ಸಾಧ್ಯ ಎಂದು ವಕೀಲ ಎ.ಬಿ.ಶೆಟ್ಟಿ ಹೇಳಿದರು.

ಭಾರತದಲ್ಲಿ ನೂತನವಾಗಿ ಜಾರಿಯಾಗಿರುವ ಭಾರತೀಯ ನ್ಯಾಯ ಸಂಹಿತೆ 2023 ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಬಗ್ಗೆ ಕುಂದಾಪುರ ವಕೀಲರ ಸಂಘದ ಆಶ್ರಯದಲ್ಲಿ ಸಂಘದ ಸಭಾಂಗಣದಲ್ಲಿ ಶುಕ್ರವಾರ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ವಕೀಲರ ಸಂಘ ಅಧ್ಯಕ್ಷ ಹಂದಟ್ಟು ಪ್ರಮೋದ ಹಂದೆ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಶ್ರೇಣಿ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಪುರುಷೋತ್ತಮ್, ಹಿರಿಯ ಸಿವಿಲ್ ನ್ಯಾಯಾಧೀಶ ರಾಜು ಎನ್., ಪ್ರಧಾನ ಸಿವಿಲ್ ನ್ಯಾಯಾಧೀಶೆ ಮಂಜುಳಾ ಬಿ., 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಶ್ರುತಿಶ್ರೀ, 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ರೋಹಿಣಿ ಡಿ., ಸಹಾಯಕ ಸರ್ಕಾರಿ ಅಭಿಯೋಜಕ ಉದಯ ಕುಮಾರ್, ಉಮಾ ಉಪಸ್ಥಿತರಿದ್ದರು. ಬೆಂಗಳೂರಿನ ಕೆಇಆರ್‌ಸಿ ಸದಸ್ಯ ಎಚ್. ಕೆ. ಜಗದೀಶ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಮಾಜಿ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಸ್ವಾಗತಿಸಿದರು. ಮಂಜುನಾಥ ಆರ್.ಅರಾಟೆ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಗಿಳಿಯಾರು ಪ್ರಕಾಶ್ಚಂದ್ರ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net