ಬ್ಯಾನರ್ ನಲ್ಲಿ ಪ್ರಧಾನಿ ಚಿತ್ರಕ್ಕೆ ಕೊಕ್, ಆಕ್ಷೇಪ ವ್ಯಕ್ತಪಡಿಸಿದ ಸಂಸದರೊಂದಿಗೆ ವಾಗ್ವಾದ

10cbp8-1.jpg
Published on

ಚಿಕ್ಕಬಳ್ಳಾಪುರ: ಕೇಂದ್ರ, ರಾಜ್ಯ ಸರ್ಕಾರ ಸಹಭಾಗಿತ್ವದ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ, ಸಂಸದರ ಆಕ್ರೋಶ
ಚಿಕ್ಕಬಳ್ಳಾಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಭಾಗಿತ್ವದ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿರುವುದರ ಬಗ್ಗೆ ಸಂಸದ ಮಲ್ಲೇಶ್ ಬಾಬು ಭಾಷಣದಲ್ಲಿ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದು ಇದು ವೇದಿಕೆಯಲ್ಲಿ ವಾಗ್ವಾದಕ್ಕೆ ಕಾರಣವಾಯಿತು.

ಚಿಂತಾಮಣಿ ನಗರದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿತ್ತು. ಇದರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ.ಸುಧಾಕರ್ ಮತ್ತಿತರರು ಭಾಗವಹಿಸಿದ್ದರು. ಇದೇ ವೇಳೆ ಸಂಸದರು ವೇದಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘನೆಯನ್ನು ಪ್ರಸ್ತಾಪಿಸಿದರು.
ಕೇಂದ್ರ ಸರ್ಕಾರವು ಅಭಿವೃದ್ಧಿ ಕಾಮಗಾರಿಗೆ ಅನುದಾನ ನೀಡಿದ ಸಂದರ್ಭದಲ್ಲಿ ವೇದಿಕೆಯ ಬ್ಯಾನರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರ ಭಾವಚಿತ್ರವನ್ನು ಅಳವಡಿಸಬೇಕು. ಆದರೆ, ಇಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಇದು ಸರಿಯಲ್ಲ ಎಂದು  ಅಸಮಾಧಾನ ವ್ಯಕ್ತಪಡಿಸಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೆಲವರು ಭಾಷಣಕ್ಕೆ ಅಡ್ಡಿಪಡಿಸಿದರು. ಹೀಗೆಲ್ಲಾ ಮಾತನಾಡಬೇಡಿ ಎಂದು ಕೂಗಿ ಹೇಳಿದರು. ಇದಕ್ಕೆ ಆಕ್ರೋಶಗೊಂಡ ಸಂಸದರು ಕಾರ್ಯಕ್ರಮವನ್ನು ಬಹಿಷ್ಕರಿಸಿ ಹೊರ ನಡೆದರು.  


*ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘನೆಯು ಸರಿಯಲ್ಲ. ಇಲ್ಲಿ ಬಹಿರಂಗವಾಗಿ ನಿಯಮ ಪಾಲನೆಯನ್ನು ಕಡೆಗಣಿಸಿರುವುದು ಕಂಡು ಬರುತ್ತಿದೆ. ಇದರ ಬಗ್ಗೆ ಗಮನ ಸೆಳೆಯಲಾಗಿದೆ.

ಮಲ್ಲೇಶ್ ಬಾಬು, ಸಂಸದ, ಕೋಲಾರ


*ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರ ಪೋಟೋಗಳನ್ನು ಹಾಕಬೇಕಾಗಿತ್ತು. ಇದನ್ನು ಪ್ರಶ್ನಿಸಲಾಗಿದೆ. ಆದರೆ, ರಾಜ್ಯದಿಂದ ಹೆಚ್ಚಿನ ತೆರಿಗೆಯನ್ನು ಪಾವತಿಸುತ್ತಿದ್ದರೂ ಕರ್ನಾಟಕಕ್ಕೆ ಪಾಲು ಸಿಗುತ್ತಿಲ್ಲ. ಇದನ್ನು ಪ್ರಶ್ನಿಸಬೇಕಲ್ಲವಾ?

ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ,

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net