ಅರಕಲಗೂಡಿನಲ್ಲಿ ಕೃತಿ ಬಿಡುಗಡೆ

14ark4 BOOK
Published on

ಅರಕಲಗೂಡು: ಶೋಷಿತ ವರ್ಗದವರಿಗೆ ನ್ಯಾಯ ಒದಗಿಸುವ ಮೂಲಕ ಸಮಾಜದಲ್ಲಿ ಸಮಾನತೆ ಸ್ಥಾಪಿಸಿದ ಡಾ. ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಎಲ್ಲರೂ ಪಾಲಿಸುವ ಮೂಲಕ ಗೌರವ ಸೂಚಿಸಬೇಕಿದೆ ಎಂದು ಕಾಂಗ್ರೆಸ್ ಮುಖಂಡ ಎಂ.ಟಿ. ಕೃಷ್ಣೇಗೌಡ ಹೇಳಿದರು. ಪಟ್ಟಣದ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ಸೋಮವಾರ ಎಂ.ಟಿ. ಕೃಷ್ಣೇಗೌಡರ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಅಂಬೇಡ್ಕರ್ ಒಂದು ಧರ್ಮ ಇಲ್ಲವೇ ಸಮುದಾಯಕ್ಕೆ ಸೀಮಿತವಲ್ಲ. ಅವರು ನಮ್ಮ ದೇಶದ ಹೆಮ್ಮೆಯಾಗಿದ್ದು ಅವರನ್ನು ಸದಾ ಸ್ಮರಿಸಿ ಗೌರವ ನೀಡಬೇಕು ಎಂದು ಹೇಳಿದರು. ಲೇಖಕ ನರೇಂದ್ರ ಕಟ್ಟಿ ಅವರ ವಿರಚಿತ ‘ಅಂಬೇಡ್ಕರ್’ ಪುಸ್ತಕ ಬಿಡುಗಡೆ ಮಾಡಿ ಸಭಿಕರಿಗೆ ಉಚಿತವಾಗಿ ಹಂಚಲಾಯಿತು. ಮುಖಂಡರಾದ ಬಿ.ಜೆ. ರಾಮೇಗೌಡ, ಗಂಗೂರು ಯೋಗಣ್ಣ, ಎಲ್.ಬಿ. ಕೃಷ್ಣ, ಕಾಂತರಾಜು, ಸತೀಶ್, ತಾಪಂ ಮಾಜಿ ಅಧ್ಯಕ್ಷ ದೇವರಾಜೇಗೌಡ ಇತರರು ಇದ್ದರು. ಇದಕ್ಕೂ ಮುನ್ನ ತಾಲೂಕು ಕಚೇರಿ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net