ಸೇನಾ ರ‌್ಯಾಲಿಯಲ್ಲಿ ಸಾವಿರಾರು ಯುವಕರು ಭಾಗಿ

5imam2-Web
ವಿಟಿಯು ಕ್ರೀಡಾಂಗಣದಲ್ಲಿ ಸೇನಾ ಭರ್ತಿ ರ‌್ಯಾಲಿಯ ಎರಡನೇ ದಿನವಾದ ಶುಕ್ರವಾರ ಸಾವಿರಾರು ಯುವಕರು ಉತ್ಸಾಹದಿಂದ ಭಾಗವಹಿಸಿದ್ದರು.
Published on

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಶುಕ್ರವಾರ ಜರುಗಿದ ಸೇನಾ ಭರ್ತಿ ರ‌್ಯಾಲಿಯಲ್ಲಿ ಸಾವಿರಾರು ಯುವಕರು ಉತ್ಸಾಹದಿಂದ ಭಾಗವಹಿಸಿದರು.

ರ‌್ಯಾಲಿ ಹಿನ್ನೆಲೆಯಲ್ಲಿ ವಿಟಿಯು ಆವರಣ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿತ್ತು. ರ‌್ಯಾಲಿಯಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಕೊಂಡಿದ್ದ ಯುವಕರಿಗೆ ನಸುಕಿನ ಜಾವ 4ರಿಂದ ಬೆಳಗ್ಗೆ 8ರ ವರೆಗೆ ಆವರಣ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಯಿತು. ರಾಯಚೂರು, ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲೆಗಳ ಯುವಕರು ರ‌್ಯಾಲಿಯಲ್ಲಿ ಭಾಗವಹಿಸಿದ್ದರು. ಬಸ್ ನಿಲ್ದಾಣದಿಂದ ವಿಟಿಯುಗೆ ಸಾರಿಗೆ ಸಂಸ್ಥೆ ವಿಶೇಷ
ಬಸ್ ವ್ಯವಸ್ಥೆ ಕಲ್ಪಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net