ಒತ್ತಡದಿಂದ ಅಭಿವೃದ್ಧಿ ಕಾರ್ಯ ಕುಂಠಿತವಾಗಿದೆ

Published on

ಸಾಲಿಗ್ರಾಮ: ಮೇಲ್ಮಟ್ಟದ ರಾಜಕಾರಣಿಗಳು ಮತ್ತು ಸ್ಥಳೀಯ ಮುಖಂಡರ ಒತ್ತಡಕ್ಕೆ ಸಿಲುಕಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸದಿಂದ ವಿಮುಖರಾಗುತ್ತಿದ್ದಾರೆ. ಹಾಗಾಗಿ ಇದರಿಂದ ಸಾಲಿಗ್ರಾಮ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗುತ್ತಿವೆ ಎಂದು ಗ್ರಾಪಂ ಸದಸ್ಯ ಎಸ್.ಆರ್. ಪ್ರಕಾಶ್ ಆರೋಪಿಸಿದರು.

ಗ್ರಾಮ ಪಂಚಾಯಿತಿಯಲ್ಲಿ ಕೆಲಸಗಳು ಆಗುತ್ತಿಲ್ಲ. ಕಾಣದ ಕೈಗಳು ಪ್ರಬಲವಾಗಿ ಒತ್ತಡ ಹಾಕುತ್ತಿವೆ ಎಂದು

ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ. ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಕುಡಿಯುವ ನೀರನ್ನು ಪಂಚಾಯಿತಿಯಿಂದ ಸರಬರಾಜು ಮಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ರಾಜಕಾರಣಿಗಳ ಒತ್ತಡದಿಂದ ಈಗಾಗಲೇ ಒಬ್ಬ ಪಿಡಿಒ ವರ್ಗ ಮಾಡಿಸಿಕೊಂಡು ಹೋದರು. ಈಗಿರುವ ಪಿಡಿಒ ಕೂಡಾ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದಾರೆ. ಇದು ಅಭಿವೃದ್ಧಿ ಕಾರ್ಯಗಳಿಗೆ ಮಾರಕವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಸಾಲಿಗ್ರಾಮ ಗ್ರಾಮ ಪಂಚಾಯಿತಿಯು 30 ಜನ ಸದಸ್ಯರನ್ನು ಹೊಂದಿರುವ ಜಿಲ್ಲೆಯ ದೊಡ್ಡ ಗ್ರಾಪಂ

ಆಗಿದೆ. ಆದರೂ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರಗತಿ ಕಂಡಿಲ್ಲ. ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net