ಸುತ್ತಲಿನ ಪರಿಸರ ಸ್ವಚ್ಛವಾಗಿಡಿ

26ALD04
ಅಳವಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಲೇರಿಯಾ ಮಾಸಾಚರಣೆ ಜಾಗೃತಿ ಕಾರ್ಯಕ್ರಮ ನಡೆಯಿತು. ವೈದ್ಯಾಧಿಕಾರಿ ಚಂದ್ರಶೇಖರ ಮೇಟಿ, ಸಿಬ್ಬಂದಿ ಚನ್ನವೀರಯ್ಯ, ನಾಗರಾಜ, ರವೀಂದ್ರ ಕಮ್ಮಾರ, ಸೌಮ್ಯ, ಕಲ್ಲಪ್ಪ ಇತರರಿದ್ದರು.
Published on

ಅಳವಂಡಿ: ಮಲೇರಿಯಾ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲರೂ ಸಂಕಲ್ಪ ಮಾಡೋಣ ಎಂದು ವೈದ್ಯಾಧಿಕಾರಿ ಚಂದ್ರಶೇಖರ ಮೇಟಿ ತಿಳಿಸಿದರು.

ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಮಲೇರಿಯಾ ಮಾಸಾಚರಣೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಲೇರಿಯಾ, ಸೊಳ್ಳೆಯಿಂದ ಮನುಷ್ಯನಿಗೆ ಹರಡುವ ರೋಗ. ಅನಾಫಿಲಿಸ್ ಸೊಳ್ಳೆ ಕಚ್ಚಿದಾಗ ಜ್ವರ ಬರುತ್ತದೆ.

ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ. ಮಲೇರಿಯಾ ಜ್ವರ ಹೊಂದಿದ ವ್ಯಕ್ತಿಗಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ವಿಪರೀತ ಜ್ವರ, ಹಲ್ಲು ಕಚ್ಚಿಕೊಳ್ಳುವಷ್ಟು ಚಳಿ, ಜತೆಗೆ ಮೈಕೈ ನೋವು ಸಾಮಾನ್ಯ ಸಮಸ್ಯೆಗಳಾಗಿ ಕಾಡುತ್ತವೆ. ಮೊದಲೇ ಇವುಗಳ ಬಗ್ಗೆ ಅರಿತು ಚಿಕಿತ್ಸೆ ಪಡೆಯಬೇಕು. ಮನೆ ಸುತ್ತಲಿನ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸಂಜೆ ಸೊಳ್ಳೆಗಳು ಹೆಚ್ಚಾಗುವುದರಿಂದ ರಾತ್ರಿ ವೇಳೆ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಸೊಳ್ಳೆಗಳ ತಾಣ ನಾಶಮಾಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net