ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಿ

Published on

ತಾವರಗೇರಾ: ಸಮೀಪದ ಹಿರೇತೆಮ್ಮಿನಾಳ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಬಿಡಬೇಕೆಂದು ಒತ್ತಾಯಿಸಿ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಸಂಗನಾಳ ಬಸ್ಸನ್ನು ತಡೆದು ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿದಿನ ಹಿರೇತೆಮ್ಮಿನಾಳ, ಗಂಗನಾಳ, ಸಂಗನಾಳದಿಂದ 35-40 ವಿದ್ಯಾರ್ಥಿಗಳು ತಾವರಗೇರಾ, ಕನಕಗಿರಿ, ಗಂಗಾವತಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಆದರೆ, ಸಮಯಕ್ಕೆ ಸರಿಯಾಗಿ ಬಸ್ ಇರದ ಕಾರಣ ಅಭ್ಯಾಸಕ್ಕೆ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳ ಅಭ್ಯಾಸದ ದೃಷ್ಟಿಯಿಂದ ಸರಿಯಾದ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಆಗ್ರಹಿಸಿದರು. ವಿದ್ಯಾರ್ಥಿಯರಾದ ಯಮನಮ್ಮ, ಜಯಶ್ರೀ, ರಾಧಿಕಾ, ಅನಸೂಯಾ, ವಿಜಯಲಕ್ಷ್ಮೀ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net