

ಬೇಲೂರು: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಾಲೂಕಿನ ಬಿಕ್ಕೋಡು ಸಮೀಪದ ವಾಟೇಹೊಳೆ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಶಾಸಕ ಎಚ್.ಕೆ.ಸುರೇಶ್ ಶನಿವಾರ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಬಳಿಕ ಮಾತನಾಡಿ, ವಾಟೆಹೊಳೆ ಜಲಾನಯನ ಪ್ರದೇಶವಾದ ಬಿಕ್ಕೋಡು ಹಾಗೂ ಮಲೆನಾಡು ಭಾಗದಲ್ಲಿ ನಿರಂತರ ಮಳೆ ಬೀಳುತ್ತಿರುವುದರಿಂದ ಜಲಾಶಯ ಭರ್ತಿಯಾಗಿದ್ದು, ಬಾಗಿನ ಅರ್ಪಿಸಿದ್ದೇವೆ. ಜಲಾಶಯ ಭರ್ತಿಯಾಗಿರುವುದರಿಂದ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕೃಷಿ ಚಟುವಟಿಕೆಗೆ ಪೂರಕವಾದ ಕೃಷಿ ಪರಿಕರಗಳನ್ನು ಸಮರ್ಪಕವಾಗಿ ವಿತರಿಸಬೇಕು ಎಂದರು. ತಹಸೀಲ್ದಾರ್ ಎಂ.ಮಮತಾ, ವಾಟೇಹೊಳೆ ಜಲಾಶಯ ವಿಭಾಗದ ಇಇ ಧರ್ಮರಾಜ್, ಪೊಲೀಸ್ ವೃತ್ತ ನಿರೀಕ್ಷಕ ಜಯರಾಂ, ಪುರಸಭೆ ಮಾಜಿ ಅಧ್ಯಕ್ಷ ಎಚ್.ಎಂ.ದಯಾನಂದ್, ಅರ್ಬನ್ ಕೋ. ಆಪರೇಟಿವ್ ಬ್ಯಾಂಕ್ ನಿರ್ದೇಶಕ ಬಿ.ಬಿ.ಶಿವರಾಜ್, ತಾಪಂ ಇಒ ಎಚ್.ಕೆ.ಸತೀಶ್, ತೋಟಗಾರಿಕೆ ಸಹಾಯಕ ನಿರ್ದೇಶಕಿ ಸೀಮಾ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಸೇರಿದಂತೆ ಇತರರಿದ್ದರು.