ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಿ

16-12-Shiva-1
ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದಿಂದ ಶನಿವಾರ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ಡಾ.ಶ್ರೀನಿವಾಸ ಹೊಸಪೇಟೆ, ಪದಾಕಾರಿಗಳಾದ ಡಾ.ಹನುಮಂತ ಕುರ್ಡಿ, ಈರಣ್ಣ ಗಟ್ಟುಬಿಚ್ಚಾಲಿ, ಶರಣಬಸವ ಮದ್ಲಾಪುರ, ವಿಶ್ವನಾಥ ಪಾಟೀಲ್, ಚಂದ್ರಶೇಖರ ಅಕ್ಕರಕಿ, ಸುರೇಶ ಬಳಗಾನೂರ, ಮಹಾದೇವಪ್ಪ, ಚೋಳರಾಜ, ದೇವರಾಜ, ಶರಣಬಸವ ಬೆಟ್ಟದೂರು, ಸ್ನೇಹಾ ಚೆಟ್ಟಿ, ಡಾ.ವಿಜಯಲಕ್ಷ್ಮಿ ಇದ್ದರು.
Published on

ರಾಯಚೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವುದು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದಿಂದ ಶನಿವಾರ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.
ನಂತರ ಮೆರವಣಿಗೆ ಮೂಲಕ ಜಿಲ್ಲಾಕಾರಿ ಕಚೇರಿಗೆ ತೆರಳಿ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಲವು ದಿನಗಳಿಂದ ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸ್ಪಂದನೆ ನೀಡಿಲ್ಲ ಎಂದು ದೂರಿದರು.
ರಾಜ್ಯದಲ್ಲಿನ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 10 ರಿಂದ 20ವರ್ಷಗಳವರೆಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರೂ ಸೇವಾ ಭದ್ರತೆ ಇಲ್ಲದಂತಾಗಿದೆ. ಕಾಯಂಗೊಳಿಸುವ ಬಗ್ಗೆ ಅಕಾರಕ್ಕೆ ಬಂದ ಸರ್ಕಾರಗಳು ಗಮನ ಹರಿಸುತ್ತಿಲ್ಲ.
ಬೆಳಗಾವಿಯ ಸುವರ್ಣ ಸೌಧದ ಮುಂದೆ ಹೋರಾಟ ನಡೆಸಿದಾಗ ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಆದರೆ ಈ ಬಗ್ಗೆ ಇದುವರೆಗೂ ಯಾವುದೇ ಮಾತುಕತೆ ನಡೆಸಿಲ್ಲ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸೇವೆ ಕಾಯಂಗೊಳಿಸಲು ಮುಂದಾಗದಿದ್ದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಡಾ.ಶ್ರೀನಿವಾಸ ಹೊಸಪೇಟೆ, ಪದಾಕಾರಿಗಳಾದ ಡಾ.ಹನುಮಂತ ಕುರ್ಡಿ, ಈರಣ್ಣ ಗಟ್ಟುಬಿಚ್ಚಾಲಿ, ಶರಣಬಸವ ಮದ್ಲಾಪುರ, ವಿಶ್ವನಾಥ ಪಾಟೀಲ್, ಚಂದ್ರಶೇಖರ ಅಕ್ಕರಕಿ, ಸುರೇಶ ಬಳಗಾನೂರ, ಮಹಾದೇವಪ್ಪ, ಚೋಳರಾಜ, ದೇವರಾಜ, ಶರಣಬಸವ ಬೆಟ್ಟದೂರು, ಸ್ನೇಹಾ ಚೆಟ್ಟಿ, ಡಾ.ವಿಜಯಲಕ್ಷ್ಮಿ, ಮುತ್ತಮ್ಮ, ಮಹಾದೇವಿ, ಶಾಹೀನ್ ಬೇಗಂ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net