ಮನೆಗೆ ನುಗ್ಗಿ ಬೆದರಿಕೆ ಹಾಕಿದವನ ಬಂಧನ

Arrest Kaidhi
Published on

ಕಾಸರಗೋಡು: ಉಪ್ಪಳ ಬೇರಿಕೆ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಎಂಬುವರ ಮನೆಗೆ ನುಗ್ಗಿ ತಲವಾರು ಬೀಸಿ, ಕೊಲೆ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ವರ್ಕಾಡಿ ಮೂಡಂಬೈಲು ಬೆಜ್ಜ ನಿವಾಸಿ ನಿಸಾರ್ ಎಂಬಾತನನ್ನು ಮಂಜೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಿಸಾರ್ ಸೇರಿದಂತೆ ನಾಲ್ವರ ವಿರುದ್ಧ ಕೇಸು ದಾಖಲಿಸಿಕೊಂಡಿದ್ದರು. ಮೊರತ್ತಣೆ ನಿವಾಸಿ ಮಹಮ್ಮದ್ ಅಸ್ಗರ್, ಬಟ್ಯಪದವು ನಿವಾಸಿ ಮಹಮ್ಮದ್ ಹುಸೈನ್ ಎಂಬುವರನ್ನು ಈ ಹಿಂದೆ ಬಂಧಿಸಲಾಗಿತ್ತು. ಕರ್ನಾಟಕದಲ್ಲಿ ತಲೆಮರೆಸಿಕೊಂಡಿದ್ದ ನಿಸಾರ್ ಊರಿಗೆ ಆಗಮಿಸಿರುವ ಬಗ್ಗೆ ಲಭಿಸಿದ ಮಾಹಿತಿಯನ್ವಯ ಕಾರ್ಯಾಚರಣೆ ನಡೆಸಿದ್ದರು. ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net