ಮೈಸೂರಿನಲ್ಲಿ ಅಂದರ್ ಬಾಹರ್ ಆಡುತ್ತಿದ್ದ 27 ಆರೋಪಿಗಳ ಬಂಧನ

gambling
Published on

ಮೈಸೂರು: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 27 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 3.15 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

ಶ್ರೀರಾಂಪುರ 2ನೇ ಹಂತದ ನಿರ್ಮಲ ಸ್ಕೂಲ್ ಹಿಂಭಾಗದ ಸರ್ವೇ ನಂ.60ಕ್ಕೆ ಸೇರಿದ ಖಾಲಿ ಜಾಗದಲ್ಲಿ ಇತ್ತೀಚೆಗೆ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 18 ಜನರನ್ನು ಬಂಧಿಸಿ 2,20,700 ರೂ. ನಗದನ್ನು ವಶ ಪಡಿಸಿಕೊಳ್ಳಲಾಯಿತು. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚೌಡೇಶ್ವರಿ ದೇವಸ್ಥಾನ ಬಳಿಯ ವಾಟರ್ ಟ್ಯಾಂಕ್ ರಸ್ತೆಯ ಪಕ್ಕದ ಖಾಲಿ ಜಾಗದಲ್ಲಿ ಇತ್ತೀಚೆಗೆ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 9 ಆರೋಪಿಗಳನ್ನು ಬಂಧಿಸಿ 1,12,750 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net