ಜೂಜಾಡುತ್ತಿದ್ದ 7 ಜನರ ಬಂಧನ

crime arrest
Published on


ಮೈಸೂರು: ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ನಗರದ ಸಿಸಿಬಿ ಪೊಲೀಸರು ಜೂಜಾಡುತ್ತಿದ್ದ 3 ಮಹಿಳೆಯರು ಸೇರಿದಂತೆ ಒಟ್ಟು 7 ಜನರನ್ನು ಬಂಧಿಸಿದ್ದು, 33,500 ರೂ. ನಗದು ವಶ ಪಡಿಸಿಕೊಂಡಿದ್ದಾರೆ.


ಹೆಬ್ಬಾಳು ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬಾಳು 2ನೇ ಹಂತದ ಮನೆ ನಂ. 2213 ಮನೆಯ ನೆಲ ಅಂತಸ್ತಿನಲ್ಲಿ ಜೂಜಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ನಗರದ ಸಿಸಿಬಿ ಪೊಲೀಸರು, ಜೂಜುಕೋರರನ್ನು ಹಣದ ಸಮೇತ ಬಂಧಿಸಿದ್ದಾರೆ. ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net