ಮೈಸೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನನ್ನು ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದು, ಆತನಿಂದ 144 ಗ್ರಾಂ ಗಾಂಜಾ ಹಾಗೂ ಗಾಂಜಾ ಮಾರಾಟಕ್ಕೆ ಬಳಸಿದ್ದ ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ.
ರಾಜೀವ್‌ನಗರದ ಬಳಿ ಯುವಕನೋರ್ವ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.