ಗಾಂಜಾ ಸಾಗಿಸುತ್ತಿದ್ದವನ ಬಂಧನ

Crime Logo
Published on

ಮೈಸೂರು: ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 35 ಸಾವಿರ ರೂ. ವೌಲ್ಯದ 1 ಕೆಜಿ 167 ಗ್ರಾಂ ತೂಕದ ಗಾಂಜಾ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.


ಸಿಸಿಬಿ ಪೊಲೀಸರು ಸೆ. 11 ರಂದು ಹೈದರಾಲಿ ಮುಖ್ಯರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದ ವೇಳೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net