ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ

ganja
Published on

ಹುಬ್ಬಳ್ಳಿ: ನಗರದ ಮಂಟೂರ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಒಬ್ಬನನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ಬಂಧಿತನಿಂದ 67,980 ರೂ. ಮೌಲ್ಯದ 2.2 ಕೆ.ಜಿ. ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಪೊಲೀಸ್ ಇನ್‌ಸ್ಪೆಕ್ಟರ್ ಜಯಪಾಲ ಪಾಟೀಲ ನೇತೃತ್ವದ ತಂಡ ವಿಶೇಷ ಕಾರ್ಯಾಚರಣೆ ನಡೆಸಿತ್ತು. ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net