ಹುಬ್ಬಳ್ಳಿ: ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ಇಲ್ಲಿಯ ಕಂಚಗಾರ ಗಲ್ಲಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಹೇಶ ಹಬೀಬ (44) ಬಂಧಿತ. ಬಂಧಿತನಿಂದ 42,200 ರೂ. ಮೌಲ್ಯದ 422 ಗ್ರಾಂ ಗಾಂಜಾ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.