

ಹುಬ್ಬಳ್ಳಿ: ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ-ಗದಗ ರಸ್ತೆಯ ರೈಲ್ವೆ ಡಿಸೇಲ್ ಲೋಕೋ ಶೇಡ್ ಹತ್ತಿರ ಶನಿವಾರ ಅಕ್ರಮ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಇನ್‌ಸ್ಪೆಕ್ಟರ್ ಬಿ.ಕೆ. ಪಾಟೀಲ ನೇತೃತ್ವದ ತಂಡ ಪಶ್ಚಿಮ ಬಂಗಾಳ ಮೂಲದ ರಾಯಚೂರು ಜಿಲ್ಲೆ ಸಿಂಧನೂರಿನ ಕುಮಾರೇಶನನ್ನು ಬಂಧಿಸಿದೆ. ಬಂಧಿತನಿಂದ 1,06,240 ರೂ. ಮೌಲ್ಯದ 5 ಕೆಜಿ 312 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡಿದ್ದು, ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.