

ಹುಬ್ಬಳ್ಳಿ: ಇಲ್ಲಿನ ಶಿರಡಿನಗರದಲ್ಲಿ ಅಕ್ರಮವಾಗಿ ಮನೆಯಲ್ಲಿ ಗಾಂಜಾ ಸಂಗ್ರಹಿಸಿಟ್ಟ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 3 ಕೆಜಿ 800 ಗ್ರಾಂ ಗಾಂಜಾ ವಶಪಡಿಸಿಕೊಂಡು, ಒಬ್ಬನನ್ನು ಬಂಧಿಸಲಾಗಿದೆ.
ಶಿರಡಿನಗರದ ಮಹ್ಮದ್ ಅಜೀಜ್ ಬೇಪಾರಿ ಬಂಧಿತರ. ಬಂಧಿತನಿಂದ 76 ಸಾವಿರ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.