ಮೈಸೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬನ್ನಿಮಂಟಪದ ಅರ್ಜಾಜ್ ಪಾಷಾನನ್ನು ಬಂಧಿಸಿರುವ ಎನ್.ಆರ್.ಠಾಣೆ ಪೊಲೀಸರು, ಬಂಧಿತನಿಂದ ಪ್ಲಾಸ್ಟಿಕ್ ಕವರ್‌ನಲ್ಲದ್ದ ಗಾಂಜಾ ಪ್ಯಾಕೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಎನ್.ಆರ್.ಮೊಹಲ್ಲಾದ ಖಬರಸ್ಥಾನದ ಬಳಿ ಪ್ಲಾಸ್ಟಿಕ್ ಕವರ್‌ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈ ಸಂಬಂಧ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.