

ಬ್ಯಾಡಗಿ: ಮಟ್ಕಾ ದಂಧೆಯಲ್ಲಿ ತೊಡಗಿದ್ದ ಸಂಗಮೇಶ್ವರ ನಿವಾಸಿಯನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.
ಸಿಕಂದರ ರಜಾಕಸಾಬ್ ಹಲಗೇರಿ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಮಂಜುನಾಥ ಕುಪ್ಪೇಲೂರು ಹಾಗೂ ಪೊಲೀಸರ ತಂಡ ದಾಳಿ ನಡೆಸಿ ಬಂಧಿಸಿದೆ.
ಬಂಧಿತನಿಂದ ಜೂಜಾಟದ ಚೀಟಿ ಹಾಗೂ 700 ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.