ಗಾಂಜಾ ಸೇವಿಸಿದ್ದ ಯುವಕನ ಬಂಧನ

GANJA
Published on

ಶಿರಸಿ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಯುವಕನನ್ನು ನಗರ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಇಲ್ಲಿನ ಕಸ್ತೂರಬಾನಗರದ ಸರ್ಪರಾಜ್ ಶಾರುಖ್ ಸಮೀರ ಖಾನ್ (23) ಬಂಧಿತ ಯುವಕ. ಈತ ಶಿರಸಿ ನಗರದ ಶಂಕರಹೊಂಡದ ಬಳಿ ಮಧ್ಯಾಹ್ನ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ವೇಳೆ ನಗರ ಠಾಣೆ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಪರೀಕ್ಷಿಸಿದ ವೈದ್ಯರು ಗಾಂಜಾ ಸೇವನೆ ಮಾಡಿರುವುದನ್ನು ದೃಢಪಡಿಸಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net