

ಶಿರಸಿ: ಬೈಕ್ ವ್ಹೀಲಿಂಗ್ ಮಾಡಿದ್ದ ಯುವಕನನ್ನು ನಗರದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಚಂದ್ರಗುತ್ತಿಯ ಅಜಯ್ ಗಣಪತಿ ಜೋಗಳೆಕರ್ ಬಂಧಿತ. ಈತ ಶಿರಸಿಯ ಆರ್.ಎನ್. ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ಎದುರಿನ ಮಣ್ಣಿನ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡಿದ ದೃಶ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ. ಇದನ್ನು ಗಂಭಿರವಾಗಿ ಪರಿಗಣಿಸಿದ ಶಿರಸಿ ಡಿವೈಎಸ್‌ಪಿ ಗಣೇಶ ಕೆ.ಎಲ್. ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.