ಹಲ್ಲೆ ಆರೋಪಿಗಳ ಬಂಧನ

Btw_Aropi Manavi
Published on

ಬಂಟ್ವಾಳ: ಕಡಬ ತಾಲೂಕು ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿ ಸಿದ್ದಲಿಂಗ ಜಂಗಮಶೆಟ್ಟಿ ಎಂಬುವರು ಸರ್ಕಾರಿ ಜಮೀನು ಅತಿಕ್ರಮಣ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅತಿಕ್ರಮಣದಾರರಾದ ಮುತ್ತುಸ್ವಾಮಿ ಮತ್ತು ಇತರರು ಸೇರಿ ಹಲ್ಲೆ ನಡೆಸಿರುವುದನ್ನು ಬಂಟ್ವಾಳ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಖಂಡಿಸಿದೆ.

ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವ ಕುರಿತು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಅನಿಲ್ ಕೆ.ಪೂಜಾರಿ, ಗೌರವಾಧ್ಯಕ್ಷ ಪ್ರವೀಣ್ ಕುಮಾರ್, ಉಪಾಧ್ಯಕ್ಷ ಕರಿಬಸಪ್ಪ ನಾಯಕ್, ಕಾರ್ಯದರ್ಶಿ ಪ್ರಶಾಂತ್, ಜಿಲ್ಲಾ ಪ್ರತಿನಿಧಿ ಮತ್ತಿಹಳ್ಳಿ ಪ್ರಕಾಶ್, ಖಜಾಂಚಿ ವೈಶಾಲಿ ಎ., ಕರ್ನಾಟಕ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಸೀತಾರಾಮ ಪೂಜಾರಿ, ಗೌರವ ಸಲಹೆಗಾರ ನವೀನ್ ಬೆಂಜನಪದವು, ರಾಜ್ಯ ಪರಿಷತ್ ಸದಸ್ಯ ಜೆ.ಜನಾರ್ದನ್, ಕಂದಾಯ ನೌಕರರ ಸಂಘದ ಗೌರವಾಧ್ಯಕ್ಷ ರಾಜೇಶ್ ನಾಯ್ಕ, ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net