ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದವನ ಸೆರೆ

Crime Logo
Published on

ಕೆ.ಆರ್.ಸಾಗರ : ಕೆ.ಆರ್.ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನನ್ನು ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. ಕೆ.ಅಲ್ತಾಫ್(ಅನ್ವರ್ ಪಾಷ) ಬಂಧಿತ.

ಮೂರು ದಿನದ ಹಿಂದೆ ಕೇರಳದಿಂದ ಬಂದಿದ್ದ ಈತ, ತನ್ನ ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಕಿರುಚಾಡಿ ತಪ್ಪಿಸಿಕೊಂಡಿದ್ದಾಳೆ. ಬಳಿಕ ವಿಷಯವನ್ನು ತಾಯಿಗೆ ತಿಳಿಸಿದ ಹಿನ್ನೆಲೆಯಲ್ಲಿ ಅವರು ದೂರು ದಾಖಲಿಸಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಗ್ರಾಮದ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net