ಮದ್ಯ ಸಾಗಿಸುತ್ತಿದ್ದ ಬಸ್ ಚಾಲಕನ ಸೆರೆ

Published on

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ರಾತ್ರಿ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.


ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಬಸ್ ಚಾಲಕ ಪಾಂಡವಪುರದ ರಾಜು (52) ಬಂಧಿತ ಆರೋಪಿ.

ಈತ ರಾತ್ರಿ 8ರ ಸುಮಾರಿಗೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಧರ್ಮೇಂದ್ರ ಹಾಗೂ ಇನ್ಸ್‌ಪೆಕ್ಟರ್ ಜಗದೀಶ್ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಬಸವರಾಜು ಹಾಗೂ ಸಿಬ್ಬಂದಿ ತಂಡ ಜೇನುಮಲೆ ಭವನ ಸಮೀಪ ದಾಳಿ ನಡೆಸಿತು. ಈ ವೇಳೆ ಬ್ಯಾಗ್ ಪರಿಶೀಲಿಸಿದಾಗ ಅಕ್ರಮ ಮದ್ಯ ಸಾಗಿಸುತ್ತಿದ್ದುದು ದೃಢಪಟ್ಟಿದೆ. ಬಳಿಕ ಆರೋಪಿಯನ್ನು ಬಂಧಿಸಿದ ಪೊಲೀಸರು, 90 ಎಂಎಲ್‌ನ 18 ಮದ್ಯದ ಪೌಚ್ ಹಾಗೂ 180 ಎಂಎಲ್‌ನ 7 ಪೌಚ್‌ಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ. ಈ ಸಂಬಂಧ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ


ದಾಳಿಯಲ್ಲಿ ಪೊಲೀಸ್ ಸಿಬ್ಬಂದಿ ಅಸ್ಲಂಪಾಷ, ರಮೇಶ್‌ಕುಮಾರ್, ವಿನೋದ್‌ಕುಮಾರ್ ಹಾಗೂ ಇನ್ನಿತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net