ಮಾದಕ ವಸ್ತು ಮಾರಾಟಗಾರರ ಬಂಧನ

Arrest of drug dealers
Published on

ಮಡಿಕೇರಿ:

ಮಡಿಕೇರಿ ನಗರ ಠಾಣಾ ಸರಹದ್ದಿನಲ್ಲಿ ಎಂಡಿಎಂಎ ಎಂಬ ಮಾದಕ ವಸ್ತು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.

ಬುಧವಾರ (ಅ.೧೮) ಮಡಿಕೇರಿಯ ಮೈಸೂರು ರಸ್ತೆ ಕಮಾನು ಗೇಟ್ ಜಂಕ್ಷನ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ಡಿ.ಸಿ.ಆರ್.ಬಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಾದ ಡಿವೈಎಸ್‌ಪಿ ಎಂ. ಜಗದೀಶ್, ಮಡಿಕೇರಿ ನಗರ ವೃತ್ತ ಸಿ.ಪಿ.ಐ ಅನೂಪ್ ಮಾದಪ್ಪ, ಪಿ.ಎಸ್.ಐ ಲೋಕೇಶ್ ನೇತೃತ್ವದ ಪೊಲೀಸ್ ಸಿಬ್ಬಂದಿ ಒಳಗೊಂಡ ತಂಡ ದಾಳಿ ನಡೆಸಿ ಅಕ್ರಮವಾಗಿ ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳಾದ ಕೇರಳ ರಾಜ್ಯ ಕಾಸರಗೋಡು ಮೂಲದ ಅಮೀರ್ ಟಿ.ಎಂ. ಮತ್ತು ಮಹಮ್ಮದ್ ಶಬೀರ್ ಎಂಬುವವರನ್ನು ದಸ್ತಗಿರಿ ಮಾಡಿ ೨೦ ಗ್ರಾಂ ನಿಷೇದಿತ ಎಂಡಿಎಂ ಮಾದಕವಸ್ತು ವಶಪಡಿಸಿಕೊಂಡಿದ್ದಾರೆ.

ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಕೆ.ಎಸ್.ಪಿ ಮೊಬೈಲ್ ತಂತ್ರಾಂಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಎಸ್‌ಪಿ ಕೆ. ರಾಮರಾಜನ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net