ನಕಲಿ ಸಿಐಡಿ ಅಧಿಕಾರಿಗಳ ಬಂಧನ

crime
Published on

ಹುಬ್ಬಳ್ಳಿ: ನಗರದಲ್ಲಿ ನಕಲಿ ಸಿಐಡಿ ಅಧಿಕಾರಿಗಳು ಎಂದು ಬಂದಿದ್ದ ಮೂವರನ್ನು ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಳೇಹುಬ್ಬಳ್ಳಿ ಕೃಷ್ಣಾಪೂರ ಓಣಿಯ ಚೇತನ ಹಡಪದ (35), ಲಿಂಗಸೂರಿನ ಪರಶುರಾಮಗೌಡ ಪಾಟೀಲ್ (45), ಕಾರಟಗಿಯ ಮಧು ಎಂ. (35) ಬಂಧಿತರು.
ಇವರು ಇತ್ತೀಚೆಗೆ ಸಿಐಡಿ ಕ್ರೈಂ ಬ್ರ್ಯಾಂಚ್ ಪೊಲೀಸರೆಂದು ಸುಳ್ಳು ಹೇಳಿ ಚೈತನ್ಯ ನಗರದ ನಿವಾಸಿ ಯಶೋಧಾ ಮದುಗಲ್ (30) ಎಂಬುವರಿಗೆ ಮೋಸ ಮಾಡಿದ್ದರು. ಹೆದರಿಸಿ ಮಹಿಳೆಯಿಂದ ಹಣ ಪಡೆದಿದ್ದರು. ಈ ಬಗ್ಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಇನ್‌ಸ್ಪೆಕ್ಟರ್ ಎಸ್.ಎಚ್. ಯಳ್ಳೂರ ನೇತೃತ್ವದ ತಂಡ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಿದೆ. ಬಂಧಿತರಿಂದ ಎರಡು ಮೊಬೈಲ್ ಫೋನ್ ಹಾಗೂ ಒಂದು ಬುಲೆಟ್ ವಾಹನ ವಶಕ್ಕೆ ಪಡೆದುಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net