ಜೂಜಾಡುತ್ತಿದ್ದ ನಾಲ್ವರ ಬಂಧನ

Published on

ಮಳವಳ್ಳಿ: ತಾಲೂಕಿನ ಮಾಗನೂರು ಸಮೀಪ ಜೂಜಾಟದಲ್ಲಿ ತೊಡಗಿದ್ದ ಗುಂಪೊಂದರ ಮೇಲೆ ಗ್ರಾಮಾಂತರ ಠಾಣೆ ಪೊಲೀಸರು ಗುರುವಾರ ರಾತ್ರಿ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

ಗ್ರಾಮದ ಹೊರವಲಯದ ಮುನೇಶ್ವರ ದೇವಾಲಯದ ಬಳಿ ಗುಂಪೊಂದು ಜೂಜಾಟದಲ್ಲಿ ತೊಡಗಿರುವ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಠಾಣೆ ಪಿಎಸ್‌ಐ ಶರವಣಕುಮಾರ್ ರೆಡ್ಡಿ ಸಿಬ್ಬಂದಿಯೊಡನೆ ದಾಳಿ ನಡೆಸಿದ್ದಾರೆ. ಸಿಕ್ಕಿಬಿದ್ದಿರುವ ಆರೋಪಿಗಳಿಂದ ಪಣಕ್ಕೆ ಇಟ್ಟಿದ್ದ 9500 ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳ ಹೆಸರನ್ನು ಬಹಿರಂಗಪಡಿಸಲಾಗದು ಎಂದು ಪೊಲೀಸರು ತಿಳಿಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net