

ಹುಬ್ಬಳ್ಳಿ: ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಇಲ್ಲಿಯ ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತರಿಂದ 7.80 ಲಕ್ಷ ರೂ. ಮೌಲ್ಯದ 11 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಕಮರಿ ಅಂಬೇಡ್ಕರ್ ಕಾಲನಿಯ ಪ್ರಕಾಶ ಕಾಂಬಳೆ (37), ವಿಜಯಪುರ ತಾಲೂಕಿನ ಹೊನ್ನಳ್ಳಿಯ ವಿಷ್ಣು ನಂದ್ಯಾಳ (40) ಬಂಧಿತರು. ಗೋಕುಲ ರೋಡ್‌ನ ಖಾನಾವಳಿ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಪೊಲೀಸ್ ಇನ್‌ಸ್ಪೆಕ್ಟರ್ ಪ್ರವೀಣ ನೀಲಮ್ಮನವರ ತಂಡವು ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್‌ಗಳನ್ನು ಕಳ್ಳತನ ಮಾಡಿದ್ದರು. ಬಂಧಿತರನ್ನು ನ್ಯಾಯಾಲಯ ವಶಕ್ಕೆ ನೀಡಲಾಗಿದೆ.