ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದವನ ಬಂಧನ

Published on

ಮೈಸೂರು: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿರುವ ನಗರ ಅಪರಾಧ ಪತ್ತೆ ದಳ (ಸಿಸಿಬಿ) ಪೊಲೀಸರು, 15 ಸಾವಿರ ರೂ. ನಗದು ಮತ್ತು ಮೊಬೈಲ್ ಫೋನ್ ವಶ ಪಡಿಸಿಕೊಂಡಿದ್ದಾರೆ.
ನಗರದ ಮೇಟಗಳ್ಳಿ ಬಳಿಯ ಮಥುರಾನಗರ ಒಂದನೇ ಮುಖ್ಯ ರಸ್ತೆಯಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಸಿಸಿಬಿ ಘಟಕದ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದರು. ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net