ತೋಟದಲ್ಲಿ ಗಾಂಜಾ ಬೆಳೆದಿದ್ದವನ ಬಂಧನ

Published on

ಗೋಣಿಕೊಪ್ಪ: ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಂಡಂಗಾಲ ಗ್ರಾಮದ ನಿವಾಸಿ ನಂಬುಡುಮಾಡ ವಿಜಯ್ ಭೀಮಯ್ಯ (39) ತನ್ನ ತೋಟದ ಮನೆ ಹಿಂಭಾಗ ಬೆಳೆದಿದ್ದ ಗಾಂಜಾ ಗಿಡವನ್ನು ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

ಬಂಧಿತನಿಂದ 1.600 ಕೆಜಿ ಹಸಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ಉಪವಿಭಾಗ ಡಿವೈಎಸ್ಪಿ ಮೋಹನ್‌ಕುಮಾರ್, ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಗೋವಿಂದರಾಜು, ವಿರಾಜಪೇಟೆ ಗ್ರಾಮಂತರ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net