ಮಾಂಗಲ್ಯ ಸರ ಕದ್ದವನ ಬಂಧನ

arrested
Published on

ಮೈಸೂರು: ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಕೊರಳಿನಲ್ಲಿದ್ದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದ ಖದೀಮನನ್ನು ನರಸಿಂಹರಾಜ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಮಹಿಳೆಯೊಬ್ಬರು ಎಂದಿನಂತೆ ಎಂಐಟಿ ಕಾಲೇಜಿಗೆ ಮೇ 16 ರಂದು ಕೆಲಸಕ್ಕೆ ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾಮನಕೆರೆ ಹುಂಡಿ ರಸ್ತೆಯಲ್ಲಿ ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಬಂದ ಖದೀಮರು, ಮಹಿಳೆಯ ಬೈಕ್ ಅಡ್ಡಗಟ್ಟಿ ಆಕೆಯ ಕೊರಳಲ್ಲಿದ್ದ 40 ಗ್ರಾಂ ತೂಕದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದುರು.


ಈ ಸಂಬಂಧ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ನರಸಿಂಹರಾಜ ಠಾಣೆಯ ಪೊಲೀಸರು, ತನ್ವೀರ್ ಸೇಠ್ ನಗರದ ಆರ್ಚ್ ಬಳಿ ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್‌ನಲ್ಲಿ ಓಡಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು.

ಈ ವೇಳೆ ಕೃತ್ಯವೆಸಗಿರುವುದಾಗಿ ಒಪ್ಪಿಕೊಂಡಿದ್ದು, ಕದ್ದ ಮಾಂಗಲ್ಯ ಸರವನ್ನು ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ. ಮಾರಾಟವಾಗಿರುವ ಚಿನ್ನದ ಸರವನ್ನು ಕರಗಿಸಿ ಗಟ್ಟಿಯಾಗಿ ಪರಿವರ್ತಿಸಿದ್ದು, ಅದನ್ನು ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಅನ್ನು ಜಪ್ತಿ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net