

ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಮಾರಿಕಾಂಬಾ ದೇವಸ್ಥಾನದ ದೇವರ ಮೂರ್ತಿಯ ಮೇಲಿದ್ದ ಬಂಗಾರದ ಸರವನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಆಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ಸಮೇತ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಸನವಳ್ಳಿ ಗ್ರಾಮದ ಮಹಾಂತೇಶ ಅರ್ಜುನ ಆರೆಗೊಪ್ಪ (43) ಬಂಧಿತ.
ಜು. 26ರಂದು ರಾತ್ರಿ ದೇವಸ್ಥಾನದ ಬೀಗ ಮುರಿದು ಒಳ ನುಗ್ಗಿ 40 ಗ್ರಾಂ. ತೂಕದ ಎರಡು ಬಂಗಾರದ ಸರಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಗ್ರಾಮಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಕುರಿತು ಪರಿಶೀಲನೆ ನಡೆಸಿದ ಪೊಲೀಸರು, ಅದೇ ಗ್ರಾಮದ ಮಹಾಂತೇಶ ಎಂಬುವನನ್ನು ಬಂಧಿಸಿ ಆತನಿಂದ ಕಳ್ಳತನ ಮಾಡಿದ್ದ ಬಂಗಾರದ ಆಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.