ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

PHOTO-01--SENE
Published on

ಚಿತ್ರದುರ್ಗ: ನಟ ದರ್ಶನ್ ಅವರನ್ನು ಅವಮಾನಿಸಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕರುನಾಡ ವಿಜಯಸೇನೆ ಕಾರ‌್ಯಕರ್ತರು ನಗರದ ಡಿಸಿ ಕಚೇರಿ ಬಳಿ ಸೋಮವಾರ ಪ್ರತಿಭಟಿಸಿದರು.

ಹೊಸಪೇಟೆಯಲ್ಲಿ ಕ್ರಾಂತಿ ಸಿನಿಮಾ ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಅವರಿಗೆ ಅಪಮಾನ ಮಾಡಿರುವ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸ ಬೇಕು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳದಿದ್ದರೆ ಚಿತ್ರದುರ್ಗದಲ್ಲಿ ಚಿತ್ರಮಂದಿರಗಳನ್ನು ಬಂದ್ ಮಾ ಡುವುದಾಗಿ ಎಚ್ಚರಿಸಿದರು. ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವ ಕುಮಾರ್,ಜಗದೀಶ್,ರವಿಕುಮಾರ್‌ನಾಯ್ಕ,ಜಿಲ್ಲಾಧ್ಯಕ್ಷೆ ವೀಣಾ ಗೌರಣ್ಣ,ಅಖಿಲೇಶ್, ಅವಿನಾಶ್,ನಾಗರಾಜ್,ಎಚ್.ಕಮಲಾ ಇದ್ದರು.

----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net