

ಶಿರಸಿ: ಮಾಂಸದ ಉದ್ದೇಶಕ್ಕಾಗಿ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ತಾಲೂಕಿನ ದೊಡ್ನಳ್ಳಿಯಲ್ಲಿ ಶನಿವಾರ ಬಂಧಿಸಿದ್ದಾರೆ.
ನರೇಬೈಲಿನ ಮಂಜುನಾಥ ಉಮೇಶ ನಾಯ್ಕ (35) ಬಂಧಿತ ಆರೋಪಿ. ಕಾಡುಕುರಿಯ ಕತ್ತರಿಸಿದ ತಲೆ, ಚರ್ಮ, ಮಾಂಸ ಬೇಟೆಗೆ ಬಳಸಿದ ಬಂದೂಕನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಡಿಎಫ್ಒ ಡಾ. ಅಜ್ಜಯ್ಯ ಜೆ.ಆರ್. ಮಾರ್ಗದರ್ಶನದಲ್ಲಿ ವಲಯಾರಣ್ಯಾಧಿಕಾರಿ ಗಿರೀಶ ನಾಯ್ಕ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.