

ರಾಯಚೂರು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನದ ವಿರುದ್ಧ ನಡೆಯುತ್ತಿದ್ದ ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯವಾಗಿದೆಂದು ಭೂಮಿ ಮತ್ತು ವಸತಿ ರೈತರ ಹೋರಾಟ ಸಮಿತಿಯ ಸಂಚಾಲಕ ಮಾರೇಪ್ಪ ಹರವಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯನಪಟ್ಟಣ ಹೋಬಳಿ ವ್ಯಾಪ್ತಿಯ 1700 ಎಕರೆಗೂ ಹೆಚ್ಚು ಕೃಷಿ
ಭೂಮಿಯ ಸ್ವಾಧೀನಕ್ಕೆ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಮುಂದಾಗಿದೆ ಇದನ್ನು ವಿರೋಧಿಸಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದರು. ಆದರೆ ಹೋರಾಟಗಾರರನ್ನು ಪೊಲೀಸರು ಬಂಧಿಸಿರುವುದು ಖಂಡನೀಯ ಎಂದರು.
ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ತಾನು ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭೂ ಸ್ವಾಧೀನ ಪ್ರಕಟಣೆ ರದ್ದುಪಡಿಸುತ್ತೇವೆ ಎಂದು ಭರವಸೆ ನೀಡಿದ್ದರು. ತಮ್ಮ ಮಾತಿನಂತೆ ಭೂಸ್ವಾಧೀನ ಪ್ರಕ್ರಿಯೆ ರದ್ದುಪಡಿಸಿ ಸಿದ್ದರಾಮಯ್ಯ ಸರ್ಕಾರ ಬದ್ಧತೆ ಮೆರೆಯಬೇಕಿತ್ತು. ಆದರೆ ಇದೀಗ ಭೂ ಸ್ವಾಧೀನಕ್ಕೆ ತಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ ಇವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಆಂಜನೇಯ ಕುರುಬದೊಡ್ಡಿ, ಲಾಲಪ್ಪ, ಶಿವರಾಜ, ನರಸಿಂಹಲು, ಹನುಮಂತ ಇದ್ದರು.