ಟಗರು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

Crime Logo
Published on

ಬ್ಯಾಡಗಿ: ಟಗರು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ಇಬ್ಬರು ಆರೋಪಿಗಳನ್ನು ಕಾಗಿನೆಲೆ ಠಾಣೆ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.

ಪಟ್ಟಣದ ಗಾಂಧಿನಗರದ ಇಮಾಮಹುಸೇನ ನೂರ್​ಅಹ್ಮದ್​ ಅಗಡಿ (23), ಇಸ್ಲಾಂಪುರ ಓಣಿ ನಿವಾಸಿ ಸುಹೇಲ್​ ಬಂಧಿತ ಆರೋಪಿತರು. ಮತ್ತೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು ಆತನ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

ಇವರು ಕಾಗಿನೆಲೆ ಗ್ರಾಮದಲ್ಲಿ 40 ಸಾವಿರ ರೂ. ಮೌಲ್ಯದ 2 ಟಗರುಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಟಗರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಕಾಗಿನೆಲೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net