ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದವನ ಬಂಧನ

Published on

ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಸಿದ್ದಾಪುರ ಪಟ್ಟಣದಲ್ಲಿ ಕರ್ತವ್ಯನಿರತ ಪೊಲೀಸ್ ಮೇಲೆ ಪಾಕಿರ್ಂಗ್ ವಿಚಾರವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹೆಲ್ಮೆಟ್‌ನಿಂದ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಸಿದ್ದಾಪುರ ಗುಹ್ಯ ಗ್ರಾಮದ ನಿವಾಸಿ ಗಣಪತಿ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ.

ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಇತ್ತೀಚೆಗೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್‌ಸ್ಟೇಬಲ್ ಸಂತೋಷ್ ಚೌಹಾಣ್ ಅವರ ಮೇಲೆ ಗಣಪತಿ ಸಾರ್ವಜನಿಕವಾಗಿ ಹಲ್ಲೆ ನಡೆಸುತ್ತಿರುವ ದೃಶ್ಯ ವೈರಲ್ ಆಗಿತ್ತು. ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ನಡೆಸಿದ ಹಲ್ಲೆ ಬಗ್ಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಸಂತೋಷ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net