ಗಾಂಜಾ ಮಾರಾಟಕ್ಕೆ ಮುಂದಾಗಿದ್ದವನ ಬಂಧನ

ganja
Published on

ಹುಬ್ಬಳ್ಳಿ: ಇಲ್ಲಿನ ಗೋಕುಲ ರೋಡ್ ಉದ್ಯಮನಗರದ 2ನೇ ಗೇಟ್ ಹೆಸ್ಕಾಂ ಕಚೇರಿ ಹತ್ತಿರ ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಒಬ್ಬನ್ನು ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದು, 150 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ನಗರದ ಮಂಜುನಾಥ ಕೆ. ಬಂಧಿತ. ಹೆಸ್ಕಾಂ ಕಚೇರಿ ಹತ್ತಿರ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್​ನಲ್ಲಿ ಗಾಂಜಾ ಚೀಟಿ ಇಟ್ಟುಕೊಂಡು ಮಾರಾಟ ಮಾಡಲು ಮುಂದಾದಾಗ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net