ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ

ganja
Published on

ಹುಬ್ಬಳ್ಳಿ: ನಗರದ ಗೂಡ್​ಶೆಡ್ ರಸ್ತೆಯ ಬಿಆರ್​ಟಿಎಸ್ ಬಸ್ ನಿಲ್ದಾಣ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರ ತಂಡ ಬಂಧಿಸಿದೆ.

ಹೊರ ರಾಜ್ಯದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ತಂಡ, ಬಂಧಿತರಿಂದ 24,700 ರೂ. ಮೌಲ್ಯದ 494 ಗ್ರಾಂ ತೂಕದ ಗಾಂಜಾ ಹಾಗೂ ಮೊಬೈಲ್ ಫೋನ್ ಮತ್ತು ನಗದು ಹಣ ಸೇರಿ ಒಟ್ಟು 32,920 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದೆ. ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net