ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ

ganja
Published on

ಹುಬ್ಬಳ್ಳಿ: ಧಾರವಾಡ ಹಾಗೂ ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯ ಬಿಡ್ನಾಳ ಹತ್ತಿರ ಅಕ್ರಮ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಸಂಜೀವ ಎಂಬಾತನಿಂದ 46,000 ರೂ. ಮೌಲ್ಯದ 460 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದು, ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡದ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಎಂ ಗಾರ್ಡನ್ ಹತ್ತಿರ ಅಕ್ರಮ ಗಾಂಜಾ ಮಾರಾಟದಲ್ಲಿ ತೊಡಗಿದ್ದವನಿಂದ 1500 ರೂ. ಮೌಲ್ಯದ 72 ಗ್ರಾಂ ಗಾಂಜಾ, ಮೊಬೈಲ್ ಪೋನ್ ಮತ್ತು 4120 ರೂ. ನಗದು ಸೇರಿದಂತೆ 7620 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಧಾರವಾಡದ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net