ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ

crime
Published on

ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಕಸಾಬಪೇಟೆ ಠಾಣೆ ಪೊಲೀಸರು ದಾಳಿ ನಡೆಸಿ, ಮೂವರನ್ನು ಬಂಧಿಸಿದ್ದು, ಅರ್ಧ ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಇಲ್ಲಿನ ಈಶ್ವರನಗರದ ಬಾರ್‌ವೊಂದರ ಹತ್ತಿರ ಹಸನಜುಬೇರ, ರೋಹಿತ್, ಹಫೀಜ್ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಬಂಧಿಸಲಾಗಿದೆ. ಕಸಾಬಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net