ಮೂವರ ಬಂಧನ

Arrest Kaidhi
Published on

ಬೆಳಗಾವಿ: ನಗರದ ವಿವಿಧ ಭಾಗಗಳಲ್ಲಿ ಸ್ಟಾಬಿಂಗ್​ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸರು ಮಾರಕಾಸ ಇಟ್ಟುಕೊಂಡು ಓಡಾಡುತ್ತಿದ್ದ ಮೂವರನ್ನು ಬಂಧಿಸಿ ಸೋಮವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ನಗರದ ದೇಶಪಾಂಡೆ ಗಲ್ಲಿಯ ಸಲ್ಮಾನ್​ ದಲಾಯತ್​ (35), ಬೆಳಗಾವಿ ತಾಲೂಕಿನ ಯರಮಾಳ ಗ್ರಾಮದ ರಾಕೇಶ ಭಂಗಿ (18), ಸಂತೋಷ ಪಠಾತ (19) ಬಂಧಿತರು. ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಿವಿಧ ಠಾಣೆಯ ಪೊಲೀಸ್​ ತಂಡಗಳು ಸಂಶಯಾಸ್ಪದ ವ್ಯಕ್ತಿಗಳ ಪರಿಶೀಲನೆ ನಡೆಸುತ್ತಿರುವ ಸಂದರ್ಭದಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಬಂಧಿತರಿಂದ 30 ಸಾವಿರ ರೂ. ಮೌಲ್ಯದ ಬೈಕ್​ ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ತನಿಖಾ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಾರ್ಕೇಟ್​ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net