ಮೈಸೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

Crime Logo
Published on

ಮೈಸೂರು: ಗಾಂಜಾ ಹಾಗೂ ಎಂಡಿಎಂ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಗುರುವಾರ ಬಂಧಿಸಿರುವ ಸೆನ್ ಠಾಣೆ ಪೊಲೀಸರು 10 ಸಾವಿರ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಹಳೆ ಕೆಸರೆ ನಿವಾಸಿ ಪ್ರೇಮಕುಮಾರ್ ಎಂಬಾತ 160 ಗ್ರಾಂ ತೂಕದ ಗಾಂಜವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ. ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು 5 ಸಾವಿರ ರಊ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಕುಂಬಾರಕೊಪ್ಪಲಿನ ಪ್ರೇಮಸಾಗರ್ ಉನ್ನತಿನಗರದ ಸೇತುವೆ ಬಳಿ ಕುಳಿತು ಎಂಡಿಎಂ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಸಿದ್ದಾರೆ. ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net