

ಮೈಸೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಭಾನುವಾರ ನಗರದ ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಆನಂದ ನಗರದ ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್ ಮೇಲೆ ದಾಳಿ ನಡೆಸಿದ್ದಾರೆ. ಮಹಿಳೆಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದು, ಪಶ್ಚಿಮ ಬಂಗಾಳದ ಒಬ್ಬ ಮಹಿಳೆ, ಬೆಂಗಳೂರು ಹಾಗೂ ಮೈಸೂರು ಮೂಲದ ಇಬ್ಬರು ಮಹಿಳೆಯರನ್ನು (ಒಟ್ಟು ಮೂವರು ಮಹಿಳೆಯರು) ರಕ್ಷಣೆ ಮಾಡಲಾಗಿದೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.