ಚೂರಿ ಇರಿದು ಕೊಲೆಗೆ ಯತ್ನಿಸಿದ್ದ ಮೂವರ ಬಂಧನ

Published on

ಸೋಮವಾರಪೇಟೆ: ಹಣಕಾಸಿನ ವಿಚಾರಕ್ಕೆ ವ್ಯಕ್ತಿಯೊಬ್ಬನಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿರುವ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಜನತಾ ಕಾಲನಿಯ ಕರೀಂಬೇಗ್, ಅಜೀಂ ಬೇಗ್, ಕಾನ್ವೆಂಟ್ ಬಾಣೆಯ ಅಜರುದ್ಧೀನ್ ಬಂಧಿತರು. ಗುರುವಾರ ರಾತ್ರಿ ಬಾರ್‌ವೊಂದರಲ್ಲಿ ಹಣಕಾಸಿನ ವಿಚಾರದಲ್ಲಿ ಮೂವರು ಆರೋಪಿಗಳು ಮಹಮ್ಮದ್ ರಿಯಾಜ್ ಎಂಬುವರ ತಲೆಗೆ ಬಿಯರ್ ಬಾಟಲ್‌ನಿಂದ ಹಲ್ಲೆ ಮಾಡಿದ್ದಾರೆ. ತಡೆಯಲು ಹೋದ ಅಬೂಬಕರ್ ಸಿದ್ದಿಕ್ ಮೇಲೆ ಹಲ್ಲೆ ನಡೆಸಿದ ಸಂದರ್ಭ ತಪ್ಪಿಸಿಕೊಂಡು ಓಡುತ್ತಿರುವಾಗ ಆರೋಪಿಗಳು ಪಟ್ಟಣ ಪಂಚಾಯಿತಿ ಎದುರು ಅಡ್ಡಗಟ್ಟಿ ಸಿದ್ದಿಕ್ ಬೆನ್ನಿನ ಭಾಗಕ್ಕೆ ಚೂರಿಯಿಂದ ಇರಿದಿದ್ದಾರೆ ಎಂದು ರಿಯಾಜ್ ನೀಡಿದ ದೂರಿನನ್ವಯ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಅಪರಾಧ ವಿಭಾಗದ ಸಬ್‌ಇನ್ಸ್‌ಪೆಕ್ಟರ್ ರಮೇಶ್‌ಕುಮಾರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net