

ಕಾಸರಗೋಡು: ಮಾರಕ ಎಂಡಿಎಂಎ ಹಾಗೂ ಗಾಂಜಾ ಸೇವಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಮಂಜೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಾವೂರು ಗೇರುಕಟ್ಟೆ ಬಳಿ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಎಂಡಿಎಂಎ ಸೇವಿಸುತ್ತಿದ್ದ ಕೆದುಂಬಾಡಿ ನಿವಾಸಿ ಅಬೂಬಕ್ಕರ್ ಸಿದ್ದಿಕ್, ಕಡಂಬಾರ್ ನಿವಾಸಿ ಜಂಶೀರ್ ಹಾಗೂ ಬಡಾಜೆ ಚೌಕಿಯಲ್ಲಿ ಗಾಂಜಾ ಸೇವಿಸುತ್ತಿದ್ದ ಮುಟ್ಟತ್ತೋಡಿ ಕಲ್ಲಕಟ್ಟ ನಿವಾಸಿ ಮಹಮ್ಮದ್ ಅಶ್ರಫ್ ಎಂಬುವರನ್ನು ಬಂಧಿಸಲಾಗಿದೆ. ಮಂಜೇಶ್ವರ ಠಾಣೆ ಎಸ್.ಐ ನಿಖಿಲ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದೆ.