ಜೂಜಾಡುತ್ತಿದ್ದ ಮೂವರ ಬಂಧನ

gambling
Published on

ಮಳವಳ್ಳಿ: ತಾಲೂಕಿನ ಟಿ.ಕಾಗೇಪುರ ಬಳಿ ಭಾನುವಾರ ಜೂಜಾಡುತ್ತಿದ್ದ ಮೂವರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗ್ರಾಮದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗುಂಪೊಂದು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ತಿಳಿದು ಇನ್ಸ್‌ಪೆಕ್ಟರ್ ಮಹೇಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಕೆಲವರು ಪರಾರಿಯಾಗಿದ್ದು, ಸಿಕ್ಕಿಬಿದ್ದ ಮೂವರನ್ನು ಬಂಧಿಸಿ ಪಣಕ್ಕಿಟ್ಟಿದ್ದ 27 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ಬಂಧಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net